ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಕಾರು

Prasthutha|

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ.

- Advertisement -


ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ.


ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.



Join Whatsapp