ಮಂಗಳೂರು: ಕರಾವಳಿಯಲ್ಲಿ ಜುಲೈ 10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರ, ಹೊನ್ನಾವರ, ಶಿರಾಲಿ, ಮುಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45-55 ಕಿ.ಮೀ ಇಂದ 65 ಕಿ.ಮೀ ವರೆಗೂ ಬೀಸುವ ಸಾಧ್ಯತೆ ಇದೆ.