ಬೆಂಗಳೂರು: 2023-24ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇನ್ನುಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಣೆ ಮಾಡುವುದಾಗಿ ಘೋಷಿಸಿದ್ದಾರೆ.
ಈ ಯೋಜನೆಯನ್ನು 9 ಮತ್ತು 10ನೇ ತರಗತಿವರೆಗೂ ವಿಸ್ತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈವರೆಗೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮಾತ್ರ ಮೊಟ್ಟೆ , ಶೇಂಗಾಚಿಕ್ಕಿ ಹಾಗೂ ಬಾಳೆಹಣ್ಣನ್ನು ವಿತರಿಸಲಾಗುತ್ತಿತ್ತು. ಇನ್ನು ಮುಂದೆ ಇದನ್ನು ವಾರದಲ್ಲಿ ಎರಡು ದಿನ ವಿತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.