ಭಾರೀ ಮಳೆ: ಕೊಚ್ಚಿ ಹೋಯ್ತು ಕಾರು, ಕುಸಿದು ಬಿದ್ದವು ಅಂಗಡಿಗಳು

Prasthutha|

- Advertisement -

ಶಿಮ್ಲಾ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ.

ಬಿಯಾಸ್ ನದಿಯ ನೀರಿನ ಮಟ್ಟ ಹೆಚ್ಚಳದಿಂದಾಗಿ ಮಂಡಿ ಜಿಲ್ಲೆಯ ಸೇತುವೆಯ ಮೇಲೆ ನೀರು ಹರಿಯುತ್ತಿದೆ. ಕುಲು ಬಳಿ ಬಿಯಸ್‌ ನದಿಯ ಪ್ರವಾಹಕ್ಕೆ ಕಾರೊಂದು ಕೊಚ್ಚಿಕೊಂಡು ಹೋಗಿದೆ.ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ನದಿ ಬಳಿ ನಿರ್ಮಿಸಿದ ಅಂಗಡಿಗಳು ಕುಸಿದು ಬಿದ್ದಿವೆ. ರಾಷ್ಟ್ರೀಯ ಹೆದ್ದಾರಿ ಕೊಚ್ಚಿಹೋಗಿದೆ.



Join Whatsapp