ಮಣಿಪುರದಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕಬೇಕು: ಸುಪ್ರೀಂಕೋರ್ಟ್

Prasthutha|

ಹೊಸದಿಲ್ಲಿ: ಮಣಿಪುರದಲ್ಲಿ ದ್ವೇಷದ ಭಾಷಣಕ್ಕೆ ಕಡಿವಾಣ ಹಾಕಬೇಕು ಮತ್ತು ಎಲ್ಲಾ ಪಕ್ಷಗಳು ಸಮತೋಲನ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

- Advertisement -

ಹಿಂಸಾಚಾರಕ್ಕೆ ಬಲಿಯಾದವರ ಮೃತದೇಹಗಳನ್ನು ಹಿಂದಿರುಗಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಮತೋಲನದ ಪ್ರಜ್ಞೆಯನ್ನು ಕಾಪಾಡಿಕೊಳ್ಳಲು ಮತ್ತು ಯಾವುದೇ ದ್ವೇಷದ ಭಾಷಣದಲ್ಲಿ ಭಾಗವಹಿಸದಂತೆ ನಾವು ಎಲ್ಲಾ ಪಕ್ಷಗಳನ್ನು ವಿನಂತಿಸುತ್ತೇವೆ ಎಂದು ಹೇಳಿದೆ.

 ಮೇ ತಿಂಗಳ ಆರಂಭದಲ್ಲಿ ಕುಕಿ ಮತ್ತು ಮೈತಿ ಸಮುದಾಯಗಳ ನಡುವೆ ಘರ್ಷಣೆಗಳು ನಡೆದಾಗಿನಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 150 ಜನರು ಸಾವಿಗೀಡಾಗಿದ್ದು ಅನೇಕರು ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರವು ಹಿಂಸಾಚಾರವನ್ನು ಪ್ರಾಯೋಜಿಸುತ್ತಿದೆ ಎಂದು ಆರೋಪಿಸಿರುವ ಕುಕಿ ಸಮುದಾಯವನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅದನ್ನು ಕಡಿಮೆ ಮಾಡಲು ಸಹಾಯ ಮಾಡಲು ನ್ಯಾಯಾಲಯದ ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

- Advertisement -

ಮಣಿಪುರದ ನಾಗರಿಕರ ಜೀವಗಳನ್ನು ರಕ್ಷಿಸುವ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ನಾವು ಕೇಂದ್ರ ಸರ್ಕಾರ ಮತ್ತು ಮಣಿಪುರ ರಾಜ್ಯಕ್ಕೆ ಹೇಳುವುದಾಗಿ ನ್ಯಾಯಮೂರ್ತಿ ಚಂದ್ರಚೂಡ್ ಈ ವೇಳೆ ಹೇಳಿದರು.



Join Whatsapp