ಟ್ರಾನ್ಸ್’ಫಾರ್ಮರ್ ಸ್ಫೋಟ: 15 ಮಂದಿ ಸಾವು

Prasthutha|

ಡೆಹ್ರಾಡೂನ್: ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಮರಣ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಮಾಮಿ ಗಂಗೆ ಯೋಜನೆಯಲ್ಲಿ ತೊಡಗಿದ್ದ ವೇಳೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಈ ವೇಳೆ ಮೂವರು ಪೊಲೀಸರು ಹಾಗೂ ಮೂವರು ಹೋಮ್ ಗಾರ್ಡ್ ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು ಅವರನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.



Join Whatsapp