ಜೈನಮುನಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಬಿಜೆಪಿ, ಜೆಡಿಎಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ ಸಿಎಂ, ಜೈನಮುನಿ ಅವರು ಕಾಣೆಯಾಗಿರುವ ಬಗ್ಗೆ ಜುಲೈ 7 ರಂದು ದೂರು ಬಂದಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು ಎಂದರು.

- Advertisement -


ನಾರಾಯಣಪ್ಪ ಬಸಪ್ಪ ಮಾಳಗಿ ಅವರ ಜಮೀನಿನ ಕೊಳವೆ ಬಾವಿಯಲ್ಲಿ ಹಾಕಲಾಗಿದ್ದ ಶವದ ಅವಶೇಷಗಳನ್ನು 7 ಗಂಟೆಗಳ ಸತತ ಕಾರ್ಯಾಚರಣೆ ಮೂಲಕ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಹಣಕಾಸು ವಿಚಾರಕ್ಕಾಗಿ ಸ್ವಾಮೀಜಿ ಅವರನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾರೆ ಎಂದು ಸದನದಲ್ಲಿ ಹೇಳಿದರು. ಈ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸುವುದಾಗಿ ತಿಳಿಸಿದರು. ಈ ಹಿಂದೆ ಬಿಜೆಪಿ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಹಲವು ಬಾರಿ ಪ್ರತಿಭಟನೆ ನಡೆಸಿತ್ತು. ರಾಜ್ಯ ಸರ್ಕಾರ ಸಿಬಿಐ ತನಿಖೆ ಬೇಡಿಕೆಯನ್ನು ತಳ್ಳಿ ಹಾಕಿತ್ತು. ಅಂತಿಮವಾಗಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.



Join Whatsapp