ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಓರ್ವ ಆರೋಪಿ ಅರೆಸ್ಟ್

Prasthutha|

ಇಂಫಾಲ್: ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದೆ.


ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆರವಣಿಗೆಯ ವೀಡಿಯೋದಲ್ಲಿ ಆರೋಪಿ ಹಸಿರು ಟಿ ಶರ್ಟ್ ಧರಿಸಿದ್ದ. ಇದೇ ವೀಡಿಯೋ ಸಹಾಯದಿಂದ ತೌಬಲ್ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೋ 2 ತಿಂಗಳ ಹಳೆಯದ್ದಾಗಿದೆ. ಮಣಿಪುರದಲ್ಲಿ ಹಿಂಸಾಚಾರ ಆರಂಭಗೊಂಡ ಬಳಿಕ ಕಾಂಗ್ ಫೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ನಡೆದಿದೆ. ಈ ಸಂಬಂಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ಬಂಧಿಸಲು 12 ಜನ ಪೊಲೀಸರ ತಂಡ ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp