ನವದೆಹಲಿ: ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಮಾಡಿದ ಪೈಶಾಚಿಕ ಕೃತ್ಯದ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಗುರುವಾರ ಆಕ್ರೋಶ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಾರ್ಟಿ (ಎಎಪಿ), ಬಿಜೆಪಿ ಎಂದರೆ ‘ಬ್ರಿಜ್ ಭೂಷಣ್ ಜನತಾ ಪಕ್ಷ’ ಎಂದು ಟೀಕಿಸಿದೆ.
ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರೆ ಪ್ರಿಯಾಂಕಾ ಕಕ್ಕರ್, ತಪ್ಪಿತಸ್ಥರನ್ನು ಪತ್ತೆ ಹಚ್ಚಲು ವಿಳಂಬವಾ’ವಿಡಿಯೊ ಹರಿದಾಡುತ್ತಿದ್ದಂತೆ ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ಮತ್ತು ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದವರ ಮುಖಗಳು ವಿಡಿಯೊದಲ್ಲಿ ಕಾಣಿಸುತ್ತವೆ. ಆದಾಗ್ಯೂ ಅವರನ್ನು ಗುರುತಿಸಲು ಪೊಲೀಸರಿಗೆ ಇನ್ನೆಷ್ಟು ಸಮಯ ಬೇಕು?’ ಎಂದಿದ್ದಾರೆ.
‘ಘಟನೆ ಕುರಿತು ಇಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತಕ್ಕೊಳಗಾಗಿರುವುದಾಗಿ ತಿಳಿಸಿದ್ದಾರೆ. ಸುಮಾರು 77 ದಿನಗಳಿಂದ ಹಿಂಸಾಚಾರಕ್ಕೆ ಮಣಿಪುರ ಸಾಕ್ಷಿಯಾಗಿದೆ. ‘ಈ ಆಘಾತ’ ವ್ಯಕ್ತಪಡಿಸಲು ಅವರು ಇಷ್ಟು ಸಮಯ ತೆಗೆದುಕೊಂಡದ್ದು ಏಕೆ?’ ಎಂದು ಕೇಳಿದ್ದಾರೆ.