ಮಂಗಳೂರು: ಪಣಂಬೂರು ಬೀಚ್’ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರು

Prasthutha|

►ಆ್ಯಂಟಿ ಕಮ್ಯುನಲ್ ವಿಂಗ್ ಆರಂಭವಾದ ಬಳಿಕವೂ ಮುಂದುವರಿದ ಕೃತ್ಯ

- Advertisement -

ಮಂಗಳೂರು: ಪಣಂಬೂರು ಬೀಚ್’ಗೆ ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.


ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್ ಗೆ ತೆರಳಿದ್ದರು. ಈ ವೇಳೆ ಸಂಘಪರಿವಾರದ ಕಾರ್ಯಕರ್ತರು ಬೈಕ್ ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.

- Advertisement -


ಬೀಚ್ ಗೆ 4 ಜನ ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ತೆರಳಿದ್ದರು. ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಇನ್ನು ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ದ.ಕ. ಜಿಲ್ಲೆಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಆರಂಭವಾದ ಬಳಿಕವೂ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿರುವ ಖಂಡನೀಯ ಎಂದು ಹೇಳಿದ್ದಾರೆ.



Join Whatsapp