ಸಕಲೇಶಪುರ | ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

Prasthutha|

ಹಾಸನ: ಟಿಪ್ಪರ್ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ.

- Advertisement -


ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ವೇಳೆ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp