ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ 14 ಜನರ ಗುರುತು ಪತ್ತೆ ಮಾಡಲಾಗಿದ್ದು, ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.
ಮೇ 4ರಂದು ಕಾಂಗ್ ಪೋಕ್ಸಿ ಜಿಲ್ಲೆಯಲ್ಲಿ ನಡೆದ ಘಟನೆಯ ವೀಡಿಯೋ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಬಳಿಕ ಪ್ರಕರಣ ಸಂಬಂಧ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.