ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ಮುಡಿಪು ಜಂಕ್ಷನ್ ನಲ್ಲಿ ನಡೆದಿದೆ.
ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ ನಲ್ಲಿ ತಿರುಗುವ ಸಂದರ್ಭ, ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.