ನೆಲ್ಯಾಡಿ | ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Prasthutha|

ನೆಲ್ಯಾಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿಯಲ್ಲಿ ನಡೆದಿದೆ.

- Advertisement -

ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.


ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

- Advertisement -


ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Join Whatsapp