ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಅಡಚಣೆ ಉಂಟಾಗಿದ್ದು, ಹೀಗಾಗಿ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಭಾರೀ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರಲು ಪ್ರಯತ್ನಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮನವಿ ಮಾಡಿದ್ದಾರೆ.


ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ತಮ್ಮ ಕೋರಿಕೆಯಂತೆ ಸರ್ಕಾರಿ ನೌಕರರ ವರ್ಗಾವಣೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸಚಿವರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದು, ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ.
ಕೆಲವು ವಿಷಯಗಳನ್ನು ಚರ್ಚಿಸಲು ಶಾಸಕರು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಕೇಳಿದ್ದಾರೆ. ನಾವು ಕೂಡ ಕೆಲವು ಹಣಕಾಸಿನ ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚಿಸಲು ಬಯಸುತ್ತೇವೆ. ಏಕೆಂದರೆ ನಾವು 40,000 ಕೋಟಿ ರೂ.ಗಳನ್ನು(ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು) ಮೀಸಲಿಡಬೇಕಾಗುತ್ತದೆ. ಶಿವಕುಮಾರ್ ಹೇಳಿದರು.



Join Whatsapp