ಬಂಟ್ವಾಳ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮೂವರು ಸಂಘಪರಿವಾರದ ಕಾರ್ಯಕರ್ತರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಬಾಲಕಿ ನೀಡಿದ ಮಾಹಿತಿ ಆಧರಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್ ಸಿ, ಎಸ್ ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯನ್ನು 2019 ರಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಜಯಪ್ರಕಾಶ್ ಎಂಬಾತ ಅತ್ಯಾಚಾರ ನಡೆಸಿದ್ದ. ಕಳೆದ ಜನವರಿಯಲ್ಲಿ ಅಕ್ಷಯ್ ಎಂಬಾತ ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಅತ್ಯಾಚಾರ ನಡೆಸಿದ್ದಾನೆ.
ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬಾತ ಬಾಲಕಿಗೆ ಕರೆ ಮಾಡಿ ಮಾತನಾಡುತ್ತಿದ್ದ. ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿ, ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿರುತ್ತಾನೆ.
ಕಳೆದ ಜೂನ್ ತಿಂಗಳಿನ ಮೊದಲ ವಾರದಲ್ಲಿ ಅಚ್ಚು ಯಾನೆ ಅಕ್ಷಯ್ ಎಂಬಾತನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಅಲ್ಲದೇ 2023ರ ಜುಲೈ 28ರಂದು ರಾತ್ರಿ ವೇಳೆ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆ ನೀಡಿದ್ದ. ಅಲ್ಲದೇ ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯ ಖಾಲಿ ಮನೆಗೆ ಬರಲು ಹೇಳಿ ಬಾಲಕಿಯು ಹೋದಾಗ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅದರಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.