ನವದೆಹಲಿ: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನಲ್ಲೂ ಬಿಗ್ ರಿಲೀಫ್ ಸಿಕ್ಕಿದೆ.
ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್ ನಿರಾಳರಾಗಿದ್ದಾರೆ.