ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ

Prasthutha|

ಚಿಕ್ಕಮಗಳೂರು: ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

- Advertisement -

 ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಅಧಿಕಾರ ಕೊಟ್ಟಿದ್ದು ನೀವು ಹೇಳಿದ ಗ್ಯಾರಂಟಿ ನಂಬಿ. ಬೆಲೆ ಏರಿಕೆ ಬರೆ ಎಳೆಯುತ್ತಾರೆ ಅಂತಾ ಯಾರೂ ಊಹಿಸಿರಲಿಲ್ಲ ಎಂದಿದ್ದಾರೆ.

ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಯ್ತು

- Advertisement -

ಅಮುಲ್ ಮತ್ತು ನಂದಿನಿ ತಾಂತ್ರಿಕ ಸಹಕಾರ ಬಗ್ಗೆ ರೈತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದಾರೆ. ಚುನಾವಣೆ ವೇಳೆ ಅಮಿತ್ ಶಾ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡಿದರು. ಕಳೆದ 50 ವರ್ಷದಿಂದ ಟಿಟಿಡಿಗೆ ನಂದಿನಿ ತುಪ್ಪ ಪೂರೈಕೆ ಆಗುತ್ತಿದೆ. ನಂದಿನಿ ತುಪ್ಪ ಸರಬರಾಜು ಸ್ಥಗಿತ ಸುದ್ದಿ ಕೇಳಿ ದುಃಖವಾಗಿದೆ ಎಂದು ಹೇಳಿದರು.

ತಿರುಪತಿ ಪ್ರಸಾದಕ್ಕೆ ನಂದಿನಿ ತುಪ್ಪ ಸೇರುತ್ತೆ ಅನ್ನೋದೆ ಹೆಮ್ಮೆ ಸಂಗತಿ. ಸಹಕಾರ ಸಚಿವರು, KMF ಅಧ್ಯಕ್ಷರು ಪ್ರತಿಷ್ಠೆ ಬಿಟ್ಟು ಟಿಟಿಡಿ‌ ಜೊತೆ ಮಾತನಾಡುವಂತೆ ಸಲಹೆ ನೀಡುತ್ತೇನೆ. 50 ವರ್ಷದ ವ್ಯವಹಾರಿಕ ಸಂಬಂಧವನ್ನು ಮುಂದುವರಿಸಬೇಕು. ಸಲಹೆ ಸ್ವೀಕಾರ ಮಾಡದಿದ್ದರೆ ಹಾಲು ಉತ್ಪಾದಕರಿಗೆ ನಷ್ಟವಾಗುತ್ತದೆ ಎಂದರು.

ಹೈಕಮಾಂಡ್​​ ಭೇಟಿಗೆ ದೆಹಲಿಗೆ ತೆರಳದ ಮಾಜಿ ಶಾಸಕ ಸಿ.ಟಿ.ರವಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್​​ನಲ್ಲಿರುವ ಮಾಜಿ ಶಾಸಕ ಸಿ.ಟಿ.ರವಿ ಇಂದು ದೆಹಲಿಗೆ ತೆರಳುವುದಾಗಿ ಹೇಳಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಹೈಕಮಾಂಡ್​​ ಭೇಟಿಗೆ ತೆರಳದೇ ಬೆಂಗಳೂರಿನಿಂದ ಚಿಕ್ಕಮಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಬುಧವಾರ ದೆಹಲಿಗೆ ತೆರಳಿ ವರಿಷ್ಠರ ‌ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.



Join Whatsapp