ನವದೆಹಲಿ: ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿಚಾರವಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ ಮತ್ತು ತಲೆ ಕೂದಲಿನ ಬಗ್ಗೆ ಆರಗ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಉತ್ತಮವಾಗಿದೆ. ಅದು ಫಸ್ಟ್ ಕ್ಲಾಸ್ ಆಗಿದೆ, ಅಲ್ಲಿಗೆ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸೋಣ ಎಂದಿದ್ದಾರೆ.