ಗಂಗಾವತಿ: ಹದಿನಾಲ್ಕು ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತಗಾರರಾಗಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ವಿರೋಧಿಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಕೆಆರ್ಪಿ ಪಾರ್ಟಿ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಲೋಕಾಯುಕ್ತ ನಿವೃತ್ತ ನ್ಯಾ| ಸಂತೋಷ್ ಹೆಗ್ಡೆ ಯಾವ ಅರ್ಥದಲ್ಲಿ ಆರು ತಿಂಗಳ ಅನಂತರ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಜನತಾ ಪರಿವಾರದಿಂದ ಬಂದಿರುವುದರಿಂದ ಆಡಳಿತದ ಸರ್ವ ಮಗ್ಗಲುಗಳು ಅವರಿಗೆ ಗೊತ್ತಿವೆ. ರಾಜ್ಯದ ಆರ್ಥಿಕ ಶಕ್ತಿ ಹೆಚ್ಚಿ ಐದು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ರಾಜ್ಯ ಇಡೀ ರಾಷ್ಟ್ರಕ್ಕೆ ಮಾದರಿಯಾಗಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿದ್ದಾಗ ಕರ್ನಾಟಕದ ಖಜಾನೆ ತುಂಬಿತ್ತು. ಇದೀಗ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಜನಮನ್ನಣೆ ಪಡೆದಿದೆ. ಇದನ್ನು ಎಲ್ಲ ಪಕ್ಷಗಳು ಸ್ವಾಗತಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಏಳೆಂಟು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಾಗುವುದು. ಎನ್ಡಿಎ ಅಥವಾ ಇಂಡಿಯಾ ಪರ ನಿಲ್ಲುವುದಿಲ್ಲ ಎಂದರು.