ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ತಡ ಎಗ್ಗಿಲ್ಲದೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ರಾಜ್ಯ ಸರ್ಕಾರ, ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿದೆ.
ಮೊನ್ನೇ ಅಷ್ಟೇ ಬರೋಬ್ಬರಿ 211 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳಗಾಗುವಷ್ಟರಲ್ಲೇ ವರ್ಗಾವಣೆಗೆ ತಡೆ ನೀಡಿತ್ತು. ಇಂದು(ಆಗಸ್ಟ್ 03) ಮತ್ತೆ 50 ಪಿಎಸ್ಐಗಳನ್ನು ವರ್ಗಾವಣೆಗೊಳಿಸಲಾಗಿದೆ.
ಮೊನ್ನೇ ಅಷ್ಟೇ ರಾಜ್ಯದ 211 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದ್ದ ಸರ್ಕಾರ, ಬೆಳಗಾಗುವಷ್ಟರಲ್ಲೇ 19 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ತಡೆಹಿಡಿದು ವಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು. ಈಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆಯಾಗಿದ್ದು, ಈ ಬಾರಿ ಒಟ್ಟು 50 ಪಿಎಸ್ಐಗಳನ್ನು ವರ್ಗಾವಣೆಗೊಳಿಸಲಾಗಿದೆ.