ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ, ಬಿಜೆಪಿ ಮುಖಂಡನಿಂದ ವಂಚನೆ ಆರೋಪ ?

Prasthutha|

ಸಾಮಾಜಿಕ ಜಾಲತಾಣಗಳಲ್ಲಿ ಪತ್ರ ವೈರಲ್

- Advertisement -


ಉಡುಪಿ: 2023ನೇ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಪಕ್ಷ ಮತ್ತು ಆರ್ ಎಸ್ ಎಸ್ ಹೆಸರಿನಲ್ಲಿ ಕೋಟ್ಯಂತರ ರೂ. ಪಡೆದು ಕೆಲವರು ವಂಚಿಸಿರುವುದಾಗಿ ಆರೋಪಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ವೈರಲ್ ಆಗಿದೆ.


ಕುಂದಾಪುರದ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರ ಹೆಸರಿನಲ್ಲಿ ಈ ಪತ್ರ ಹರಿದಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -


ಪತ್ರದಲ್ಲಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಹಾಗೂ ಅವರ ಮೂಲಕ ಪರಿಚಯವಾದ ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು, ಹೊಸಪೇಟೆಯ ಹಾಲಶ್ರೀ ಮಠದ ಹಾಲಶ್ರೀ ಸ್ವಾಮೀಜಿಯ ಹೆಸರು ಸೇರಿದಂತೆ ಮೊಬೈಲ್ ಸಂಖ್ಯೆಯನ್ನು ಕೊನೆಯಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿದೆ.


ಈ ಬಗ್ಗೆ ಪ್ರತಿಕ್ರಿಯೆಸಿದ ಚೈತ್ರಾ ಕುಂದಾಪುರ, ಇದು ಸುಳ್ಳು ಸುದ್ದಿ. ಸೋಷಿಯಲ್ ಮೀಡಿಯಾಗಳಲ್ಲಿ ಫೇಕ್ ಲೆಟರ್ ಗಳನ್ನು ಹಾಕಿ, ನಮ್ಮ ತೇಜೋವಧೆ ಮಾಡುತ್ತಿರುವ ಬಗ್ಗೆ ಎಲ್ಲರ ವಿರುದ್ಧ ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ ಎಂದು ಹೇಳಿದ್ದಾರೆ.



Join Whatsapp