ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ | ಹಾನಿಗೆ ಸಂಬಂಧಿಸಿದ ವೀಡಿಯೊ ನೀಡುವಂತೆ ಸಾರ್ವಜನಿಕರಿಗೆ ಸರಕಾರದ ಮನವಿ

Prasthutha|

ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರ ಘಟನೆಯಲ್ಲಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ ಎಂದು ತೋರಿಸುವ ಆಡಿಯೊ, ವೀಡಿಯೊ ಅಥವಾ ಇತರೆ ಧ್ವನಿಮುದ್ರಣಗಳನ್ನು ನೀಡುವಂತೆ ಸಾರ್ವಜನಿಕರಿಗೆ ಸರ್ಕಾರ ಮನವಿ ಮಾಡಿಕೊಂಡಿದೆ.

- Advertisement -

ಹಿಂಸಾಚಾರ ಘಟನೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸುವ ವೇಳೆ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ರಾಜ್ಯ ಸರಕಾರ, 2020ರ ಆಗಸ್ಟ್ 11ರಂದು ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದ ವೀಡಿಯೊ, ಆಡಿಯೊ, ಧ್ವನಿಮುದ್ರಿಕೆಗಳನ್ನು ಸಲ್ಲಿಸುವಂತೆ ಜ.27ರಂದು ಸಾರ್ವಜನಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದೆ.

ಕ್ಲೇಮ್ ಕಮೀಷನರ್ ಕಚೇರಿ ಬಾಲಬ್ರೂಯಿ ಅತಿಥಿ ಗೃಹದಲ್ಲಿದ್ದು, ಹಾನಿಗೆ ಸಂಬಂಧಿಸಿದ ಯಾವುದೇ ಸಾಕ್ಷ್ಯಾಧಾರಗಳನ್ನು ಅಧಿಕಾರಿಗಳಿಗೆ ನೀಡಬಹುದಾಗಿದೆ. ಫೆ.28ರ ವರೆಗೆ ಶನಿವಾರ ಒಂದು ದಿನ ಬಿಟ್ಟು ಉಳಿದೆಲ್ಲಾ ದಿನಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯ ವರೆಗೂ ಜನರು ಸಾಕ್ಷ್ಯಾಧಾರಗಳನ್ನು ಸಲ್ಲಿಸಬಹುದಾಗಿದ್ದು, ಸಾಕ್ಷ್ಯಾಧಾರಗಳ ಜೊತೆಗೆ ಜನರು ಬರವಣಿಗೆ ಮೂಲಕ ತಮ್ಮ ಹೆಸರು, ವಿಳಾಸ, ಫೋನ್ ನಂಬರ್, ಇ-ಮೇಲ್ ಐಡಿ ಸೇರಿದಂತೆ ಇತರೆ ಮಾಹಿತಿಗಳನ್ನು ನೀಡಬೇಕೆಂದು ತಿಳಿಸಲಾಗಿದೆ ಎಂದು ಸರಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.  

Join Whatsapp