ನವದೆಹಲಿ: ನಟ ರಜನಿಕಾಂತ್
ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಕಾಲಿಗೆ ನಮಸ್ಕರಿಸಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.
ಇದು ಒಂದು ವರ್ಗದ ಜನರಿಗೆ ಸರಿ ಎನಿಸಿಲ್ಲ. ಹಾಗಾಗಿ ರಜನಿಕಾಂತ್ ಅವರ ನಡೆಯನ್ನು ಅನೇಕರು ಖಂಡಿಸುತ್ತಿದ್ದಾರೆ.
ಇಬ್ಬರ ನಡುವೆ ವಯಸ್ಸಿನ ಅಂತರ ತುಂಬ ದೊಡ್ಡದಿದೆ. ಯೋಗಿ ಆದಿತ್ಯನಾಥ್ ಅವರಿಗಿಂತ ರಜನಿಕಾಂತ್ ಅವರು 21 ವರ್ಷ ಹಿರಿಯರು. ಹಾಗಾಗಿ ಕಿರಿಯ ವ್ಯಕ್ತಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಹಲವರು ವಿರೋಧಿಸುತ್ತಿದ್ದಾರೆ.