ಇಸ್ರೋ ಅಧ್ಯಕ್ಷ, ಚಂದ್ರಯಾನ-3 ತಂಡಕ್ಕೆ ರಾಜ್ಯಪಾಲರಿಂದ ಸನ್ಮಾನ

Prasthutha|

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಸ್ರೋಗೆ ಭೇಟಿ ನೀಡಿ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ತಂಡದ ಮುಖ್ಯ ಸದಸ್ಯರನ್ನು ಶುಕ್ರವಾರ ಸನ್ಮಾನಿಸಿದರು.

- Advertisement -

ಅಧ್ಯಕ್ಷ ಎಸ್. ಸೋಮನಾಥ್ ಮತ್ತು ಅವರ ಸಮರ್ಪಿತ ತಂಡವನ್ನು ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನೆಯನ್ನು ಮುಂದುವರಿಸುವ ನಿರಂತರ ಅನ್ವೇಷಣೆಗಾಗಿ ಹಾಗೂ ಅವರ ಅಚಲ ಬದ್ಧತೆಯು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ. ಮಾತ್ರವಲ್ಲದೆ ಜಾಗತಿಕ ಬಾಹ್ಯಾಕಾಶ ವೇದಿಕೆಯಲ್ಲಿ ಭಾರತದ ಪರಾಕ್ರಮವನ್ನು ಪ್ರದರ್ಶಿಸುತ್ತದೆ ಎಂದು ರಾಜ್ಯಪಾಲರು ಶ್ಲಾಘಿಸಿದರು.

ಈ ತಂಡದ ನಿರಂತರ ಪ್ರಯತ್ನಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿ ಮತ್ತು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಸ್ಥಾನಮಾನವನ್ನು ಹೆಚ್ಚಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.



Join Whatsapp