ರೈಲಿನಲ್ಲಿ ಅಗ್ನಿ ಅವಘಡ : 8 ಪ್ರಯಾಣಿಕರು ಮೃತ್ಯು

Prasthutha|

ಮಧುರೈ: ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಘಟನೆಯಲ್ಲಿ ಎಂಟು ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -

ಮೃತರು ಉತ್ತರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಮದುರೈನಲ್ಲಿ ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.

ಮಧುರೈನಲ್ಲಿ ಏಕಾಏಕಿ ಬೆಂಕಿ ಅಗ್ನಿ ಅವಘಡ ಸಂಭವಿಸಿದಾಗ ರೈಲನ್ನು ನಿಲ್ಲಿಸಲಾಗಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ ಈ ರೈಲಿನಲ್ಲಿದ್ದ ಭಕ್ತರು ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ. ಒಂದು ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೇರೆ ಬೋಗಿಗಳಿಗೆ ಬೆಂಕಿ ವ್ಯಾಪಿಸಿದೆ. ರೈಲಿನಲ್ಲಿ 60ಕ್ಕೂ ಹೆಚ್ಚು ಮಂದಿ ಇದ್ದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

ಇನ್ನೂ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಮೃತದೇಹಗಳನ್ನು ಗುರುತಿಸಲಾಗಿದೆ.



Join Whatsapp