ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕೆನ್ನೆಗೆ ಹೊಡೆಸಿದ ಯುಪಿ ಶಿಕ್ಷಕಿ ವಿರುದ್ಧ FIR

Prasthutha|

ಉತ್ತರ ಪ್ರದೇಶ: ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಹಿಂದು ವಿದ್ಯಾರ್ಥಿಗಳಿಗೆ ಶಿಕ್ಷಕಿಯೊಬ್ಬರು ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಇದೀಗ ಆ ಖಾಸಗಿ ಶಾಲೆಯ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಇಂತಹ ಪ್ರಕರಣದಲ್ಲಿ ಪೊಲೀಸರು ವಾರಂಟ್ ಇಲ್ಲದೆ ಆರೋಪಿಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿ ಬೇಕಾಗುತ್ತದೆ.

- Advertisement -

ಸಂತ್ರಸ್ತಮಗುವಿನ ಪೋಷಕರು ಪ್ರಕರಣವನ್ನು ಮುಂದುವರಿಸಲು ನಿರಾಕರಿಸಿದ ಒಂದು ದಿನದ ನಂತರ ಅಂದರೆ ಶನಿವಾರ ದೂರು ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ. ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಮತ್ತು ಸಂತ್ರಸ್ತ ಬಾಲಕ ಅವಮಾನದಿಂದ ಅಳುವುದನ್ನು ಕಾಣಬಹುದು.

- Advertisement -

ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?



Join Whatsapp