ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಜಗನ್ನಾಥಪುರದಲ್ಲಿ ಸಂಭವಿಸಿದೆ.
ಘಟನೆಯು ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಐದು ಮಂದಿ ಗಂಭೀರ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರ್ಖಾನೆ ಸಂಪೂರ್ಣ ಸುಟ್ಟು ಕರಕಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಆಗಮಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು ಕಾರ್ಖಾನೆಯಿಂದ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.