ಚೆನ್ನೈ: ಜರ್ಮನಿಯಿಂದ ಸ್ವದೇಶಕ್ಕೆ ಮರಳಿದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ವಿಮಾನ ನಿಲ್ದಾಣದಲ್ಲಿ ಪ್ರಜ್ಞಾನಂದ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣದಲ್ಲಿ ಇಷ್ಟೊಂದು ಜನರನ್ನು ನೋಡಿ ನನಗೆ ತುಂಬಾನೇ ಸಂತೋಷವಾಗಿದೆ. ಇದು ನಿಜವಾಗಿಯೂ ಅದ್ಭುತ ಕ್ಷಣವಾಗಿದೆ. ಇದು ಚೆಸ್ಗೆ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ ಎಂದು ಭಾರತೀಯ ಚೆಸ್ ಗ್ರ್ಯಾಂಡ್ಮಾಸ್ಟರ್ ಮತ್ತು 2023 ರ FIDE ವಿಶ್ವಕಪ್ ರನ್ನರ್-ಅಪ್ ಪ್ರಜ್ಞಾನಂದ ಅವರು ಹೇಳಿದರು.
ವಿಮಾನ ನಿಲ್ದಾಣದಲ್ಲಿ ಡೊಳ್ಳು, ಬಾಜಾ-ಭಜಂತ್ರಿ ಮುಂತಾದ ವಾದ್ಯ, ಮೊಳಗಿದವು. ಅಷ್ಟೇ ಅಲ್ಲ ಪ್ರಜ್ಞಾನಂದ ಅವರನ್ನು ಬರಮಾಡಿಕೊಳ್ಳಲು ಸಹಪಾಠಿಗಳು, ಅಖಿಲ ಭಾರತ ಚೆಸ್ ಫೆಡರೇಶನ್ ಪ್ರತಿನಿಧಿಗಳು ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.