ಚಿಕ್ಕಮಗಳೂರು: ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರಿನಲ್ಲಿ ಪರಮೇಶ್ವರಪ್ಪ(52) ಆತ್ಮಹತ್ಯೆ ಮಾಡಿಕೊಂಡ ರೈತ.
ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ಮನೆಯಲ್ಲೇ ನೇಣುಬಿಗಿದುಕೊಂಡು ರೈತ ಪರಮೇಶ್ವರಪ್ಪ ಮನೆಯಲ್ಲೇ ನೇಣುಬಿಗಿದುಕೊಂಡು ಪ್ರಾಣಕಳೆದುಕೊಂಡಿದ್ದಾರೆ.