ಮೈಸೂರು: ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಆ ಮೂಲಕ 2023 ರ ನಾಡಹಬ್ಬ ದಸರಾಗೆ ಮುನ್ನುಡಿ ಬರೆಯಲಾಯಿತು.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅಭಿಮನ್ಯು ನೇತೃತ್ವದ 9 ಗಜಪಡೆಗಳಾದ ಮಹೇಂದ್ರ, ಅರ್ಜುನ, ವರಲಕ್ಷ್ಮಿ, ಧನಂಜಯ, ಗೋಪಿ, ವಿಜಯ, ಪಾರ್ಥಸಾರಥಿ, ರೋಹಿತ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉಸ್ತುವಾರಿ ಸಚಿವ ಮಹಾದೇವಪ್ಪ ಜೊತೆಗೂಡಿದ ಗಣ್ಯರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು.