SDPI ಹೆಸರಿನ ನಕಲಿ ಫೇಸ್‌ಬುಕ್ ಪೇಜ್ ವಿರುದ್ಧ SDPI ದ.ಕ ಜಿಲ್ಲಾಧ್ಯಕ್ಷರಿಂದ ದೂರು

Prasthutha|

ಮಂಗಳೂರು : Isupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ಪಕ್ಷದ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ನಲ್ಲಿ ಪೇಜ್ ಒಂದನ್ನು ರಚಿಸಿ ಅದರಲ್ಲಿ ಪಕ್ಷದ ಕೆಲವು ಕಾರ್ಯಚಟುವಟಿಕೆಗಳ ವೀಡಿಯೋಗಳನ್ನು ಅಪ್ಲೋಡ್ ಮಾಡುವುದರೊಂದಿಗೆ ಅಶ್ಲೀಲ ವೀಡಿಯೋಗಳನ್ನು ನಿರಂತರವಾಗಿ ಅಪ್ಲೋಡ್ ಮಾಡುವ ಮೂಲಕ ಸಮಾಜದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆಯುಂಟು ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ.

- Advertisement -

ಇದನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು ಈಗಾಗಲೇ ಪಾಂಡೇಶ್ವರ ಠಾಣೆಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದಾರ.

ಬಳಿಕ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರನ್ನು ಜಿಲ್ಲಾ ನಿಯೋಗವು ಭೇಟಿಯಾಗಿ ಈ ವಿಚಾರದಲ್ಲಿ ಆರೋಪಿಗಳ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಆಯುಕ್ತರು ಹಾಗೂ ಪಾಂಡೇಶ್ವರ ಠಾಣೆಯ ಸಬ್ ಇನ್ಸ್ಪೆಕ್ಟರ್ ರವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

- Advertisement -

ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಮತ್ತು ಮಂಗಳೂರು ದಕ್ಷಿಣ ಕ್ಷೇತ್ರ ಸಮಿತಿ ಸದಸ್ಯರಾದ ಶರೀಫ್ ಪಾಂಡೇಶ್ವರ ರವರು ಉಪಸ್ಥಿತರಿದ್ದರು.



Join Whatsapp