ಭಾರತ ಹಿಂದೂ ರಾಷ್ಟ್ರವಲ್ಲ ಹಾಗೂ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಮೋಹನ್ ಭಾಗವತ್’ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

Prasthutha|

ನವದೆಹಲಿ: ಭಾರತ ಹಿಂದೂ ರಾಷ್ಟ್ರವಲ್ಲ ಮತ್ತು ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

- Advertisement -


ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ಅಧಿಕೃತ ಎಕ್ಸ್ (ಟ್ವಿಟ್ಟರ್)ನಲ್ಲಿ ಭಾರತವು ಹಿಂದೂ ರಾಷ್ಟ್ರವಲ್ಲ, ಮತ್ತು ಅದು ಎಂದೂ ಹಿಂದೂ ರಾಷ್ಟ್ರವಾಗಿರಲಿಲ್ಲ. ಭಾರತ ಬಹುತ್ವವನ್ನು ಅಂತರ್ಗತ ಮಾಡಿಕೊಂಡಿರುವ ರಾಷ್ಟ್ರವಾಗಿದೆ ಎಂದು ಹೇಳಿದ್ದಾರೆ.


ನಾಗ್ಪುರದಲ್ಲಿ ನಡೆದ ‘ಮಧುಕರ್ ಭವನ’ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋಹನ್ ಭಾಗವತ್, ಭಾರತವು ‘ಹಿಂದೂ ರಾಷ್ಟ್ರ’ ಮತ್ತು ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳು ಎಲ್ಲಾ ಭಾರತೀಯರನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದರು.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ವಾಮಿ ಪ್ರಸಾದ್ ಮೌರ್ಯ, ನಮ್ಮ ಸಂವಿಧಾನವು ಜಾತ್ಯತೀತ ರಾಜ್ಯದ ಕಲ್ಪನೆಯನ್ನು ಆಧರಿಸಿದೆ. ಭಾರತದಲ್ಲಿರುವ ಎಲ್ಲಾ ಜನರು ಭಾರತೀಯರು. ನಮ್ಮ ಭಾರತೀಯ ಸಂವಿಧಾನವು ಎಲ್ಲಾ ಧರ್ಮಗಳು, ನಂಬಿಕೆಗಳು, ಪಂಗಡಗಳು ಮತ್ತು ಸಂಸ್ಕೃತಿಗಳನ್ನು ಪ್ರತಿನಿಧಿಸುತ್ತದೆ ಎಂದು ಬರೆದಿದ್ದಾರೆ



Join Whatsapp