ಉಳ್ಳಾಲ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ನೀರುಪಾಲು

Prasthutha|

ಮಂಗಳೂರು: ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ.

- Advertisement -


ಡಾ. ಆಶೀಕ್ ಗೌಡ (30) ಸಮುದ್ರ ಪಾಲಾದ ವೈದ್ಯ.


ಇವರು ಬೆಂಗಳೂರಿನ ನಿವಾಸಿಯಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಾಗ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp