ಭೀಕರ ಅಪಘಾತ: ನಾಲ್ವರು ಮೃತ್ಯು

Prasthutha|

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ.

- Advertisement -


ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



Join Whatsapp