ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳು ಒಪ್ಪಿಗೆ: ಸಚಿವ ಕೆ.ಹೆಚ್. ಮುನಿಯಪ್ಪ

Prasthutha|

ಬೆಂಗಳೂರು: ಕರ್ನಾಟಕಕ್ಕೆ ಅಕ್ಕಿ ಕೊಡಲು ಮೂರು ರಾಜ್ಯಗಳು ಒಪ್ಪಿಗೆ ನೀಡಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ಅಕ್ಕಿ ಕೊಡಲು ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸಗಠ ಸರ್ಕಾರ ಮುಂದೆ ಬಂದಿವೆ ಎಂದರು.


ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

- Advertisement -


ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದರು. 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಈ ಎಲ್ಲಾ ತಾಲೂಕುಗಳಲ್ಲಿ ಬರ ಘೋಷಣೆಗೆ ಸಿದ್ಧತೆ ನಡೆಸಲಾಗಿದೆ ಎಂದರು.



Join Whatsapp