“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ: ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು : ಇಂಡಿಯಾ ಹೆಸರನ್ನು ಭಾರತ್‌ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ.

- Advertisement -


ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದು, ಮೋದಿ ಸರ್ಕಾರ ಕೇವಲ ನೇಮ ಚೇಂಜರ್ಸ್‌ ಆಗಿದೆ. ಸಮರ್ಥರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ. 2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.


ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನು ತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ ಎಂದು ಹೇಳಿದ್ದಾರೆ.

- Advertisement -



Join Whatsapp