ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

Prasthutha|

ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.

- Advertisement -


ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ವದಂತಿ ಚರ್ಚೆ ಬೆನ್ನಲ್ಲೇ ಡಿಕೆಶಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.


ಈ ವೇಳೆ ಮಾತನಾಡಿದ ಅವರು ‘ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನನಗೆ ಆಹ್ವಾನ ಕೊಟ್ಟಿದ್ದರಿಂದ ಭೇಟಿ ಆಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ರಾಜಕೀಯ ಬಗ್ಗೆ ಚರ್ಚೆ ಮಾಡೋಣ ಎಂದರು. ಇನ್ನು ಇದೇ ವೇಳೆ ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ ಅವರು ‘ನಾವು ಆಪರೇಷನ್ ಹಸ್ತ ಮಾಡಲ್ಲ, ಕೋ ಆಪರೇಷನ್ ಮಾಡ್ತೀವಿ. ಮಾಜಿ ಶಾಸಕಿ ಪೂರ್ಣಿಮಾ ತಂದೆ ದಿವಂಗತ ಕೃಷ್ಣಪ್ಪ ಅವರು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರ ತಂದೆ ನಮ್ಮ ಲೀಡರ್, ಹಾಗಾಗಿ ಅವರ ನಡುವೆ ಅನ್ಯೂನತೆ ಇದೆ. ಇನ್ನು ಪೂರ್ಣಿಮಾ ಅವರ ಜೊತೆ ನಾನು ರಾಜಕೀಯ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.



Join Whatsapp