ಸಚಿವ ಸಂಪುಟದಿಂದ ಡಿ.ಸುಧಾಕರ್ ವಜಾ ಮಾಡಿ: ಜೆಡಿಎಸ್ ಪ್ರತಿಭಟನೆ

Prasthutha|

ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ಎಸಗಿರುವ ಡಿ.ಸುಧಾಕರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಬುಧವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ದಲಿತ ಕುಟುಂಬದ ಭೂಮಿಗೆ ಸಂಬಂಧಪಟ್ಟಂತೆ ದರ್ಪ, ದೌರ್ಜನ್ಯ ಎಸಗಿರುವ ಸಚಿವ ಡಿ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿ ಅವರೇ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಒತ್ತಾಯಿಸಿದ್ದಾರೆ.



Join Whatsapp