ಚೈತ್ರಾ ಕುಂದಾಪುರ ಕೇಸ್ ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬೊಮ್ಮಾಯಿ

Prasthutha|

ಮಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

- Advertisement -


ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಕಠಿಣ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದರು.



Join Whatsapp