ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಮತ್ತೋರ್ವ ಆರೋಪಿ ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 5 ಕೋಟಿ ರೂಪಾಯಿ ವಂಚಿಸಿರುವ ಆರೋಪದಡಿ ಮತ್ತೋರ್ವ ಆರೋಪಿಯನ್ನು ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -


ಸಿಸಿಬಿ ಪೊಲೀಸರು ಚನ್ನಾ ನಾಯಕ್ ಎನ್ನುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಐದು ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ.

ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದರು.



Join Whatsapp