ನೋಯ್ಡಾ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದು, 4 ಮಂದಿ ಮೃತಪಟ್ಟು, ಐವರಿಗೆ ಗಾಯಗಳಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಮೃತಪಟ್ಟವರೂ ಮತ್ತು ಗಾಯಾಳುಗಳ ಕೂಲಿಕಾರ್ಮಿಕರಾಗಿದ್ದಾರೆ.ಎಲ್ಲಾ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರೇಟರ್ ನೋಯ್ಡಾದಲ್ಲಿ ಶುಕ್ರವಾರ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ನೆಲಕ್ಕೆ ಕುಸಿಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗ್ರೇಟರ್ ನೋಯ್ಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ವರ್ಮಾ ತಿಳಿಸಿದ್ದಾರೆ.