ಉಡುಪಿ: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.
ಪ್ರಸಾದ್ ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತರಾಗಿದ್ದಾರೆ. ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್ನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.