ನವದೆಹಲಿ: ಮಹಿಳಾ ಮೀಸಲಾತಿ ಬಿಲ್ ನಲ್ಲಿ ಒಬಿಸಿ ಸಮುದಾಯದ ಮಹಿಳೆಯರನ್ನು ಸೇರ್ಪಡೆ ಮಾಡಬೇಕು, ಬಿಲ್ ನ್ನು ತಕ್ಷಣಕ್ಕೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಆಗ್ರಹಿಸಿದ್ದಾರೆ.
ಸೋನಿಯಾ ಗಾಂಧಿಯವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಸದನದಲ್ಲಿ ಮಾತನಾಡುತ್ತಾ, ತಮ್ಮ ಪಕ್ಷವು ಮಸೂದೆಯನ್ನು ಬೆಂಬಲಿಸುತ್ತದೆ. ಆದರೆ ಮಹಿಳೆಯರಿಗೆ 33% ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ. ತಮ್ಮ ಪತಿ ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಮೊದಲ ವ್ಯಕ್ತಿಯಾಗಿರುವುದರಿಂದ ಮಸೂದೆಯ ಕುರಿತು ಮಾತನಾಡುವುದು ನನಗೆ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.
ಮಹಿಳಾ ಮೀಸಲಾತಿ ಬಿಲ್ ನಲ್ಲಿ ಒಬಿಸಿ ಸಮುದಾಯದ ಮಹಿಳೆಯರನ್ನು ಸೇರ್ಪಡೆ ಮಾಡಬೇಕು: ಸೋನಿಯಾ ಗಾಂಧಿ
Prasthutha|