ಹೊಸದಿಲ್ಲಿ: ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್ ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಆಗಲು ಪ್ರಮುಖ ಪಾತ್ರ ವಹಿಸಿದ್ದ ವೇಗಿ ಮೊಹಮ್ಮದ್ ಸಿರಾಜ್, ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ನಂ.1 ಬೌಲರ್ ಸ್ಥಾನಕ್ಕೆ ಜಿಗಿದಿದ್ದಾರೆ.
ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು. ಏಷ್ಯಾ ಕಪ್ ಫೈನಲ್ ಗೂ ಮುನ್ನ ಟೀಮ್ ಇಂಡಿಯಾ ವೇಗಿ 9ನೇ ಸ್ಥಾನದಲ್ಲಿದ್ದರು.
ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದ ಶ್ರೇಯಾಂಕದಲ್ಲಿ ವಿಶ್ವದ ನಂಬರ್ ಒನ್ ಬೌಲರ್ ಆಗಿದ್ದಾರೆ.