ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿದ್ದರಾಮಯ್ಯ

Prasthutha|

ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ನವದೆಹಲಿಯಲ್ಲಿ ನಡೆದ ಸರ್ವ ಪಕ್ಷ ಸಂಸದರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು. ಮಳೆಯ ಕೊರತೆ ಅವಧಿಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಈ ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ. ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ.



Join Whatsapp