ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ

Prasthutha|

ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.

- Advertisement -

ಮತದಾನ ಮೂಲಕ ಐತಿಹಾಸಿಕ ಮಸೂದೆ ಅಂಗೀಕಾರಗೊಂಡಿದೆ. ಮಹಿಳಾ ಮೀಸಲಾತಿ ವಿಧೇಯಕ ಪರ 454 ಸಂಸದರು ಮತದಾನ ಮಾಡಿದ್ದು, ವಿಧೇಯಕದ ವಿರುದ್ಧ ಇಬ್ಬರು ಸಂಸದರು ಮತ ಚಲಾಯಿಸಿದ್ದಾರೆ.

ಲೋಕಸಭೆಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಮತದಾನ ಮಾಡುವಂತೆ ಸಂಸದರಲ್ಲಿ ಮನವಿ ಮಾಡಿದ್ದಾರೆ. ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು.



Join Whatsapp