ಬೆಂಗಳೂರು: 2022-23ರ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ 233 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿವೆ. ನಾಲ್ಕು ಗ್ರಾಮಗಳಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ಸಂದಿದೆ. ಪ್ರತೀ ತಾಲೂಕಿನ ಒಂದೊಂದು ಗ್ರಾಮವನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪರಿಗಣಿಸಲಾಗಿದೆ.
ಸರಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ರಾಜ್) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಹಾತ್ಮ ಗಾಂಧಿ ಜನ್ಮದಿನವಾದ ಅಕ್ಟೋಬರ್ 2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ.
ಪ್ರಶಸ್ತಿ ಪುರಸ್ಕೃತ ಗ್ರಾಮಗಳ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಸೇರಿದಂತೆ ಅಧಿಕಾರಿಗಳು ಭಾಗಿಯಾಗಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪುರಸ್ಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ ಜಿಲ್ಲೆಯ ಬಡಗಬೆಟ್ಟು ಮತ್ತು ಹೊಸಾಡು ಸೇರಿ ನಾಲ್ಕು ಗ್ರಾಮಗಳಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರ
ನಾಲ್ಕು ಗ್ರಾಮ ಪಂಚಾಯತ್‌ಗಳನ್ನು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಸಾಡು, ಉಡುಪಿ ತಾಲೂಕಿನ 80 ಬಡಗಬೆಟ್ಟು, ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ತಟ್ಟೇಗೇರಿ ಮತ್ತು ಬೆಳವಟಿಗೆ ಗ್ರಾಮ ಪಂಚಾಯತ್‌ಗಳು ಈ ಬಾರಿ ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ. ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಗ್ರಾಮ ಪಂಚಾಯತ್‌ಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.