ತುಮಕೂರು: ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ.
ಇದೀಗ ತುಮಕೂರಿನಲ್ಲಿ ಜೆಡಿಎಸ್‍ನ ಮತ್ತೊಂದು ವಿಕೆಟ್ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.