ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆ ಅನೇಕ ಸಂಘಟನೆಗಳು ಬೆಂಬಲ ನೀಡಿದ್ದು, ಅದರಂತೆ ಇದೀಗ ಬೀದಿ ಬದಿ ವ್ಯಾಪಾರಿಗಳು ಕೂಡ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.
ಬೆಳಗ್ಗೆ 6 ರಿಂದ ಸಂಜೆ 6 ವರೆಗೂ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ಥಳೀಯ ಮಾರ್ಕೆಟ್ ಬೀದಿ ಬದಿ ವ್ಯಾಪಾರಗಳು ಸಂಪೂರ್ಣ ಸ್ಥಗಿತವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ರಂಗಸ್ವಾಮಿ ಹೇಳಿದ್ದಾರೆ.